ಕುಡುಪು ವಲಸೆ ಕಾರ್ಮಿಕನ ಗುಂಪು ಹತ್ಯೆಗೆ ಜಿಲ್ಲಾ ಯುವ ಕಾಂಗ್ರೆಸ್ ಖಂಡನೆ : ಆರೋಪಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಇಬ್ರಾಹಿಂ ನವಾಝ್ ಆಗ್ರಹ - Karavali Times ಕುಡುಪು ವಲಸೆ ಕಾರ್ಮಿಕನ ಗುಂಪು ಹತ್ಯೆಗೆ ಜಿಲ್ಲಾ ಯುವ ಕಾಂಗ್ರೆಸ್ ಖಂಡನೆ : ಆರೋಪಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಇಬ್ರಾಹಿಂ ನವಾಝ್ ಆಗ್ರಹ - Karavali Times

728x90

29 April 2025

ಕುಡುಪು ವಲಸೆ ಕಾರ್ಮಿಕನ ಗುಂಪು ಹತ್ಯೆಗೆ ಜಿಲ್ಲಾ ಯುವ ಕಾಂಗ್ರೆಸ್ ಖಂಡನೆ : ಆರೋಪಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಇಬ್ರಾಹಿಂ ನವಾಝ್ ಆಗ್ರಹ

ಮಂಗಳೂರು, ಎಪ್ರಿಲ್ 29, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಹೊರವಲಯದ ಕುಡುಪು ಬಳಿ ಉತ್ತರ ಭಾರತದ ಯುವಕನಿಗೆ ಗಂಭೀರವಾಗಿ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿ ನವಾಝ್ ಒತ್ತಾಯಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟನೆಯ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲ ಮೂಡಿದ್ದು, ವದಂತಿಗಳು ಹರಿದಾಡುತ್ತಿದೆ. ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ಗುಂಪನ್ನು ಶೀಘ್ರವೇ ಪತ್ತೆ ಹಚ್ಚಿ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 

ಇಂತಹ ಹತ್ಯೆಗಳು ಮರುಕಳಿಸಬಾರದು, ಪೆÇಲೀಸರು ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಆಗ್ರಹಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕುಡುಪು ವಲಸೆ ಕಾರ್ಮಿಕನ ಗುಂಪು ಹತ್ಯೆಗೆ ಜಿಲ್ಲಾ ಯುವ ಕಾಂಗ್ರೆಸ್ ಖಂಡನೆ : ಆರೋಪಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಇಬ್ರಾಹಿಂ ನವಾಝ್ ಆಗ್ರಹ Rating: 5 Reviewed By: karavali Times
Scroll to Top