ಬಂಟ್ವಾಳ, ಮೇ 03, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರರಿಬ್ಬರು ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಅದಾಳ ಎಂಬಲ್ಲಿ ಗುರುವಾರ ಸಂಭವಿಸಿದೆ.
ಗಾಯಾಳು ದ್ವಿಚಕ್ರ ವಾಹನ ಸವಾರರನ್ನು ಚಾಲಕ ಮಹಮ್ಮದ್ ಅಶ್ರಫ್ ಹಾಗೂ ಸಹಸವಾರನನ್ನು ಸತೀಶ್ ಎಂದು ಹೆಸರಿಸಲಾಗಿದೆ. ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಗೋವಿಂದ ರಾಜ್ ಎಂಬವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















0 comments:
Post a Comment