ಬಂಟ್ವಾಳ, ಮೇ 27, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಕೈಕಂಬ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ವೇಳೆ ಸಂಭವಿಸಿದೆ.
ಮೃತ ಕಾರು ಚಾಲಕನನ್ನು ಮಂಚಿ ಗ್ರಾಮದ ಭಂಡಾರಕೊಟ್ಟಿಗೆ ನಿವಾಸಿ ಜಯಂತ ಗೌಡ ಯಾನೆ ಜಯರಾಮ ಎಂದು ಗುರುತಿಸಲಾಗಿದೆ. ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಇವರು ಮಂಗಳವಾರ ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತುಂಬೆ ಕಡೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
0 comments:
Post a Comment