ಬಂಟ್ವಾಳ, ಮೇ 14, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿಯಾಗಿ ದ್ವಿಚಕ್ರ ಸವಾರ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಮಂಚಿ ಗ್ರಾಮದ ಕುಕ್ಕಾಜೆ ಸೈಟ್ ನಿವಾಸಿ ಲಿಖಿತ್ ಪೂಜಾರಿ (22) ಎಂದು ಹೆಸರಿಸಲಾಗಿದೆ.
ಮಂಗಳವಾರ ಸಂಜೆ ವೇಳೆ ಬಿ ಸಿ ರೋಡಿನಿಂದ ಮನೆಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಈತನನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ವೇಳೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment