ಬಂಟ್ವಾಳ, ಜೂನ್ 01, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾಗಿರುವ ಫೇಸ್ ಬುಕ್ ಖಾತೆಯಲ್ಲಿ ಕೋಮು ಪ್ರಚೋದನಕಾರು ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ವಿಟ್ಲ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಟ್ಲ ಸಮೀಪದ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿರುತ್ತಾನೆ. ಸದ್ರಿ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಶನಿವಾರ ಅಪರಾಧ ಕ್ರಮಾಂಕ 72/2025 ಕಲಂ: 353(2) BNS 2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment