ಬೆಂಗಳೂರು, ಮೇ 24, 2025 (ಕರಾವಳಿ ಟೈಮ್ಸ್) : ಮೇ 24 ರಿಂದ ಮೇ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಸಹಿತ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮೇ 24 ರಿಂದ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೇ 24 ರಿಂದ 28 ರವೆರೆಗೆ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
0 comments:
Post a Comment