ಮಂಗಳೂರು, ಮೇ 30, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದ್ದು, ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮೇ 31 ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಸಿಬಿಎಸ್ಸಿ ಹಾಗೂ ಪದವಿಪೂರ್ವ ತರಗತಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಮಳೆ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನೂ ಡೀಸಿ ಘೋಷಿದ್ದಾರೆ.
30 May 2025
Related Posts
- Blogger Comments
- Facebook Comments
Subscribe to:
Post Comments (Atom)
0 comments:
Post a Comment