ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಶುರೂ : ಮಧ್ಯರಾತ್ರಿ ಭಾರತೀಯ ಸೇನೆ 23 ನಿಮಿಷಗಳ ಕಾಲ ನಡೆಸಿದ “ಆಪರೇಶನ್ ಸಿಂದೂರ್” ಗೆ ಪಾಕಿಸ್ತಾನ ತತ್ತರ - Karavali Times ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಶುರೂ : ಮಧ್ಯರಾತ್ರಿ ಭಾರತೀಯ ಸೇನೆ 23 ನಿಮಿಷಗಳ ಕಾಲ ನಡೆಸಿದ “ಆಪರೇಶನ್ ಸಿಂದೂರ್” ಗೆ ಪಾಕಿಸ್ತಾನ ತತ್ತರ - Karavali Times

728x90

6 May 2025

ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಶುರೂ : ಮಧ್ಯರಾತ್ರಿ ಭಾರತೀಯ ಸೇನೆ 23 ನಿಮಿಷಗಳ ಕಾಲ ನಡೆಸಿದ “ಆಪರೇಶನ್ ಸಿಂದೂರ್” ಗೆ ಪಾಕಿಸ್ತಾನ ತತ್ತರ

ನವದೆಹಲಿ, ಮೇ 07, 2025 (ಕರಾವಳಿ ಟೈಮ್ಸ್) : ಬುಧವಾರ ಸೂರ್ಯೋದಯಕ್ಕಿಂತ ಮುಂಚಿತವಾಗಿಯೇ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಮುಟ್ಟಿ ನೋಡುವಂತಹ ಉತ್ತರ ನೀಡಿದೆ. ಮಂಗಳವಾರ ಮಧ್ಯರಾತ್ರಿ ವೇಳೆ ಕಾಶ್ಮೀರದ ಪಹಲ್ಗಾಂ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತೀಯ ಸೇನೆ ಆಪರೇಶನ್ ಸಿಂದೂರ್ ಹೆಸರಿನಲ್ಲಿ ಏರ್‍ಸ್ಟ್ರೈಕ್ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‍ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ರಫೇಲ್ ಇನ್ನಿತರ ಫೈಟರ್ ಜೆಟ್ ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಕ್ತಾಯಗೊಳಿಸಿದೆ. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ಜೆಟ್‍ಗಳು ಸೇಫ್ ಆಗಿ ಮರಳಿವೆ. ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. 

ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ ಸರ್ಕಾರ ಪರಮಾಧಿಕಾರ ನೀಡಿದೆ. ಮಾಕ್ ಡ್ರಿಲ್‍ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ. 

ಭಾರತ ಪಾಕಿಸ್ತಾನಗಳ ನಡುವೆ ಸೇನಾ ಸಮರದ ನಡೆಯಲಿದೆ ಎಂದು ಚರ್ಚೆಯಾಗಿತ್ತು. ಅದಕ್ಕೆ ಪೂರಕ ಎಂಬಂತೆ ಎರಡು ರಾಷ್ಟ್ರಗಳು ಸಮರಾಭ್ಯಾಸ ಸೇರಿದಂತೆ ಸೇನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸಿದ್ದವು. ಶತ್ರು ರಾಷ್ಟ್ರದಿಂದ ದಾಳಿ ನಡೆದ ಪಕ್ಷದಲ್ಲಿ ನಾಗರಿಕರಿಗೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಿದ್ಧತೆ ಕೈಗೊಳ್ಳುವುದಕ್ಕಾಗಿ ಬುಧವಾರ ನಾಗರಿಕ ಸ್ವರಕ್ಷಣೆ ತಾಲೀಮು ನಡೆಸಲು ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ರಾಜ್ಯಗಳು ಸಿದ್ಧತೆಯನ್ನೂ ನಡೆಸಿದ್ದವು. ಇದರ ನಡುವೆಯೇ ಭಾರತೀಯ ಸೇನೆಯು ಮಂಗಳವಾರ ರಾತ್ರಿ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ಭಾರತದ ಆಪರೇಷನ್ ಸಿಂಧೂರ್ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸುತ್ತಿರುವ ಸರ್ಜಿಕಲ್ ಸ್ಟ್ರೈಕ್ ಆಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, 9 ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ ಎನ್ನಲಾಗಿದೆ.

ಮಧ್ಯರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕ್ರಮಗಳು ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಬದಲಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ದಾಳಿಗೆ ಆಯ್ದುಕೊಂಡ 9 ಸ್ಥಳಗಳಲ್ಲಿ 4 ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.

  • Blogger Comments
  • Facebook Comments

0 comments:

Post a Comment

Item Reviewed: ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಶುರೂ : ಮಧ್ಯರಾತ್ರಿ ಭಾರತೀಯ ಸೇನೆ 23 ನಿಮಿಷಗಳ ಕಾಲ ನಡೆಸಿದ “ಆಪರೇಶನ್ ಸಿಂದೂರ್” ಗೆ ಪಾಕಿಸ್ತಾನ ತತ್ತರ Rating: 5 Reviewed By: karavali Times
Scroll to Top