ಬಂಟ್ವಾಳ, ಮೇ 12, 2025 (ಕರಾವಳಿ ಟೈಮ್ಸ್) : ಸ್ಕೂಟರ್ ರಸ್ತೆಗೆ ಬಿದ್ದು ಸವಾರರಿಬ್ಬರು ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿ ಸಂಭವಿಸಿದೆ.
ಗಾಯಾಳು ಸ್ಕೂಟರ್ ಸವಾರರನ್ನು ವಾಮನ ಹಾಗೂ ಧೀರಜ್ ಎಂದು ಹೆಸರಿಸಲಾಗಿದೆ. ವಾಮನ ಅವರು ಸವಾರರಾಗಿ ಧೀರಜ್ ಅವರು ಸಹಸವಾರರಾಗಿ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೆಳಗಿನ ವಗ್ಗ ಎಂಬಲ್ಲಿ ಸವಾರ ವಾಮನ ಅವರು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸಹಿತ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment