ಮಂಗಳೂರು, ಮೇ 01, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಕುಡುಪುವಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಗೋಕಾಕ್‍ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ಯಾವುದೇ ಪುರಾವೆಗಳು ಅಥವಾ ಸರಿಯಾದ ಪ್ರತ್ಯಕ್ಷದರ್ಶಿ ಸಿಕ್ಕಿಲ್ಲ. ಇಂದು ಬೆಳಗ್ಗೆ ಗೋಕಾಕ್‍ನಿಂದ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ದಾಳಿಗೆ ಕಾರಣವೇನು ಎಂಬುದನ್ನು ದೃಢೀಕರಿಸಲು ಪ್ರಕರಣದಲ್ಲಿ ನಮಗೆ ಸರಿಯಾದ ಪ್ರತ್ಯಕ್ಷದರ್ಶಿ ಇಲ್ಲ. ಪ್ರತ್ಯಕ್ಷದರ್ಶಿಗಳು ಒಬ್ಬ ವ್ಯಕ್ತಿ (ಪ್ರಮುಖ ಆರೋಪಿ ಸಚಿನ್) ಮತ್ತೊಬ್ಬ ವ್ಯಕ್ತಿಯನ್ನು ಹೊಡೆಯುವುದನ್ನು ನೋಡಿದ್ದೇವೆ ಮತ್ತು ಅವನು ಆ ವ್ಯಕ್ತಿಯನ್ನು ಏಕೆ ಹೊಡೆಯುತ್ತಿದ್ದಾನೆಂದು ಅವರಿಗೆ ಗೊತ್ತಿಲ್ಲ ಎಂದಿದ್ದಾರೆ. ಹಲ್ಲೆ ನಡೆಸುತ್ತಿದ್ದ ಸಚಿನ್ ಜತೆ ಆತನ ಸ್ನೇಹಿತರು ಸೇರಿಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ಕಮಿಷನರ್ ಅಗರ್ವಾಲ್ ತಿಳಿಸಿದರು.
ಈ ಪ್ರಕರಣದಲ್ಲಿ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ. ಗುರುವಾರ ಬೆಳಗ್ಗೆ ಗೋಕಾಕ್‍ನಿಂದ ಅನಿಲ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ಸಂಖ್ಯೆ 21ಕ್ಕೇರಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ನಮ್ಮ ತಂಡ ಹುಡುಕಾಟ ನಡೆಸುತ್ತಿವೆ. ಘಟನೆಯ ಸಮಯದಲ್ಲಿ ಹಾಜರಿದ್ದ ಮತ್ತು ವಿಚಾರಣೆಗೆ ಹಾಜರಾಗಿದ್ದ ಇನ್ನೂ 15 ಜನರಿಗೆ ನಾವು ನೋಟಿಸ್ ನೀಡಿದ್ದೇವೆ. ಆ ಪ್ರದೇಶದಲ್ಲಿ ಲಭ್ಯವಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ದಾಳಿಯಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನು ಪ್ರಶ್ನಿಸುತ್ತಿದ್ದೇವೆ ಎಂದವರು ಹೇಳಿದರು.
ಸ್ಥಳೀಯ ಪೆÇಲೀಸರಿಗೆ ಹಲ್ಲೆಯ ಬಗ್ಗೆ ಮಾಹಿತಿ ಇದ್ದರೂ, ಅವರು ಅದನ್ನು ನಮ್ಮ ಗಮನಕ್ಕೆ ತರಲಿಲ್ಲ. ಇದರಿಂದಾಗಿ ನೇರವಾಗಿ ಕೊಲೆ ಎಂದು ಪರಿಗಣಿಸಬೇಕಾದ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ಪರಿಗಣಿಸಲಾಗಿದೆ. ಆದ್ದರಿಂದ ಕರ್ತವ್ಯ ಲೋಪ ಆರೋಪದ ಮೇಲೆ ಪೆÇಲೀಸ್ ಇನ್ಸ್‍ಪೆಕ್ಟರ್ ಮತ್ತು ಇಬ್ಬರು ಕಾನ್‍ಸ್ಟೆಬಲ್‍ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಕಮಿಷನರ್ ಅನುಪಮ್ ಅಗರವಾಲ್ ಹೇಳಿದರು.
0 comments:
Post a Comment