ಬಂಟ್ವಾಳ, ಮೇ 19, 2025 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮೇ 26 ರಂದು ಬೆಳಿಗ್ಗೆ 11 ಗಂಟೆಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರು, ಪೆÇಲೀಸ್ ಉಪಾಧೀಕ್ಷಕರು ಹಾಗೂ ಪೆÇಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ. ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಲಾಗಿದೆ.
ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲು/ ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.
ಅರ್ಜಿದಾರರು ನಮೂನೆ 1 ಮತ್ತು 2ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದು ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment