ಬಂಟ್ವಾಳ, ಮೇ 30, 2025 (ಕರಾವಳಿ ಟೈಮ್ಸ್) : ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಓರ್ವ ಸವಾರ ಮೃತಪಟ್ಟು, ಇನ್ನೋರ್ವ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ಒಕ್ಕೆತ್ತೂರು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ (19) ಎಂದು ಹೆಸರಿಸಲಾಗಿದೆ. ಒಕ್ಕೆತ್ತೂರು ನಿವಾಸಿ ಪುತ್ತು ಎಂಬವರ ಪುತ್ರ ಫಾರೀಸ್ ಗಂಭೀರ ಗಾಯಗೊಂಡಿದ್ದಾರೆ.
ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟದ ಲಾರಿಯನ್ನು ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಆ ದಾರಿಯಾಗಿ ಬಂದ ಇರ್ಫಾನ್ ಹಾಗೂ ಫಾರೀಸ್ ಅವರು ಸಂಚರಿಸುತ್ತಿದ್ದ ಬೈಕ್ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಸ್ಪಂದಿಸದೆ ಇರ್ಫಾನ್ ಮೃತಪಟ್ಟಿದ್ದಾನೆ. ಫಾರಿಸ್ ಗಂಭೀರಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿಯನ್ನು ನಿಲ್ಲಿಸಿ ಚಾ ಕುಡಿಯಲು ಹೋಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment