ಬೆಂಗಳೂರು, ಮೇ 21, 2025 (ಕರಾವಳಿ ಟೈಮ್ಸ್) : ರಾಜ್ಯದ ಪ್ರಭಾರ ಪೆÇಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ, ಬೆಂಗಳೂರಿನ ಚಿಕ್ಕಬಾಣಾವರದ ಕನ್ನಡಿಗ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಎಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿತ್ತು. ಬುಧವಾರ ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ. ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.
1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ. ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೆÇಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
0 comments:
Post a Comment