ಬಂಟ್ವಾಳ, ಮೇ 25, 2025 (ಕರಾವಳಿ ಟೈಮ್ಸ್) : ಹೊಸ ಮನೆಯ ನಿರ್ಮಾಣ ಕೆಲಸ ಪೂರ್ಣಗೊಳ್ಳದ ಬಗ್ಗೆ ಮನನೊಂದು ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ನಿವಾಸಿ ನಾರಾಯಣ ನಾಯ್ಕ ಎಂಬವರ ಪುತ್ರ ಸಂತೋಷ (32) ಎಂದು ಹೆಸರಿಸಲಾಗಿದೆ. ಶನಿವಾರ ಬೆಳಿಗ್ಗೆ ತಾಯಿ ಹಾಗೂ ಸಹೋದರ ಸಂಬಂಧಿಕರ ಮನೆಯಲ್ಲಿ ನಡೆದ ದೈವಗಳ ಕಾರ್ಯಕ್ರಮಕ್ಕೆ ಹಾಗೂ ತಂದೆ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ ಸಂತೋಷ ಅವರು ಚಾವಡಿಯ ಕೋಣೆಯ ಮಾಡಿನ ಅಡ್ಡಕ್ಕೆ ನೈಲಾನ್ ಹಗ್ಗ ಕಟ್ಟಿ ಅದನ್ನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೊಸ ಮನೆಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳದ ವಿಚಾರದಲ್ಲಿ ಮನನೊಂದು ಇವರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಸಹೋದರ ನವೀನ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಅರ್ ಪ್ರಕರಣ ದಾಖಲಾಗಿದೆ.
0 comments:
Post a Comment