ಕೊಳತ್ತಮಜಲು ರಹಿಮಾನ್ ಕೊಲೆ ಹಾಗೂ ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧಿಸಿದ ಪೊಲೀಸರು, ಬಂಧಿತರ ಸಂಖ್ಯೆ 5ಕ್ಕೇರಿಕೆ - Karavali Times ಕೊಳತ್ತಮಜಲು ರಹಿಮಾನ್ ಕೊಲೆ ಹಾಗೂ ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧಿಸಿದ ಪೊಲೀಸರು, ಬಂಧಿತರ ಸಂಖ್ಯೆ 5ಕ್ಕೇರಿಕೆ - Karavali Times

728x90

30 May 2025

ಕೊಳತ್ತಮಜಲು ರಹಿಮಾನ್ ಕೊಲೆ ಹಾಗೂ ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧಿಸಿದ ಪೊಲೀಸರು, ಬಂಧಿತರ ಸಂಖ್ಯೆ 5ಕ್ಕೇರಿಕೆ

ಬಂಟ್ವಾಳ, ಮೇ 30, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಮೇ 27 ರಂದು ಅಪರಾಹ್ನ ವೇಳೆ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. 

ಬಂಧಿತರನ್ನು ತೆಂಕಬೆಳ್ಳೂರು ಗ್ರಾಮದ ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ನಿವಾಸಿ ರವಿರಾಜ್ (23) ಎಂದು ಹೆಸರಿಸಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 5ಕ್ಕೇರಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 3 ಮಂದಿ ಆರೋಪಿಗಳಾದ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪ್ರøಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19) ಎಂಬವರನ್ನು ಗುರುವಾರ ಬಂಧಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೊಳತ್ತಮಜಲು ರಹಿಮಾನ್ ಕೊಲೆ ಹಾಗೂ ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧಿಸಿದ ಪೊಲೀಸರು, ಬಂಧಿತರ ಸಂಖ್ಯೆ 5ಕ್ಕೇರಿಕೆ Rating: 5 Reviewed By: karavali Times
Scroll to Top