ಬೆಂಗಳೂರು, ಮೇ 02, 2025 (ಕರಾವಳಿ ಟೈಮ್ಸ್) : 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇ 66.14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕಳೆದ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ನಡೆದಿದ್ದು, ಶುಕ್ರವಾರ ರಾಜ್ಯ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅತೀ ಹೆಚ್ಚು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (91.12%) , ಉಡುಪಿ ದ್ವಿತೀಯ (89.96%) ಹಾಗೂ ಉತ್ತರ ಕನ್ನಡ (83.19%) ತೃತೀಯ ಸ್ಥಾನ ಪಡೆದುಕೊಂಡಿದೆ. ಕಲಬುರ್ಗಿ ಕೊನೆ ಸ್ಥಾನ ಪಡೆದಿದೆ. ಈ ಬಾರಿ 22 ಮಂದಿ 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇ 66.14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕಳೆದ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ನಡೆದಿದ್ದು, ಶುಕ್ರವಾರ ರಾಜ್ಯ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅತೀ ಹೆಚ್ಚು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (91.12%) , ಉಡುಪಿ ದ್ವಿತೀಯ (89.96%) ಹಾಗೂ ಉತ್ತರ ಕನ್ನಡ (83.19%) ತೃತೀಯ ಸ್ಥಾನ ಪಡೆದುಕೊಂಡಿದೆ. ಕಲಬುರ್ಗಿ ಕೊನೆ ಸ್ಥಾನ ಪಡೆದಿದೆ. ಈ ಬಾರಿ 22 ಮಂದಿ 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‍ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಎಸ್ಸೆಸ್ಸೆಲ್ಸಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ಹಾಗೂ ಅಂಕಪಟ್ಟಿ ಪ್ರತಿಯನ್ನು ಪಡೆದುಕೊಳ್ಳಬಹುದು.
0 comments:
Post a Comment