ಬೆಂಗಳೂರು, ಮೇ 01, 2025 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ರ ಫಲಿತಾಂಶ ಮೇ 2 ರಂದು ಶುಕ್ರವಾರ (ನಾಳೆ) ಪ್ರಕಟಗೊಳ್ಳಲಿದೆ. ಬೆಳಗ್ಗೆ 11:30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಿಸುವರು. ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖಾ ವೆಬ್‍ಸೈಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪಡೆದುಕೊಳ್ಳಬಹುದು.
ಮಾರ್ಚ್ 21 ರಿಂದ ಎಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿದ್ದು, ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‍ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ಎಸ್ಸೆಸ್ಸೆಲ್ಸಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ಹಾಗೂ ಅಂಕಪಟ್ಟಿ ಪ್ರತಿಯನ್ನು ಪಡೆದುಕೊಳ್ಳಬಹುದು.
0 comments:
Post a Comment