ಬಂಟ್ವಾಳ, ಮೇ 30, 2025 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದ ವಿದ್ಯಾರ್ಥಿಯೋರ್ವ ಶಂಕಿತ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದೆ. ಮೃತ ಬಾಲಕನನ್ನು ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್ (17) ಎಂದು ಹೆಸರಿಸಲಾಗಿದೆ.
ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೇ 30 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜ್ವರದಿಂದ ಆತನಿಗೆ ಪ್ಲೇಟ್ಲೇಟ್ ಕಡಿಮೆಯಾಗಿತ್ತು ಎನ್ನಲಾಗಿದೆ.
0 comments:
Post a Comment