ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ಅಂದರ್ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೋಮು ವಿರೋಧಿ ಕಾರ್ಯಪಡೆ ರಚಿಸಿ ಸ್ವತಂತ್ರ ಅಧಿಕಾರ ನೀಡಿ ಪರಿಸ್ಥಿತಿ ನಿಯಂತ್ರಿಸಲಾಗುವುದು : ಗೃಹ ಸಚಿವ ಡಾ ಜಿ ಪರಮೇಶ್ವರ್ - Karavali Times ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ಅಂದರ್ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೋಮು ವಿರೋಧಿ ಕಾರ್ಯಪಡೆ ರಚಿಸಿ ಸ್ವತಂತ್ರ ಅಧಿಕಾರ ನೀಡಿ ಪರಿಸ್ಥಿತಿ ನಿಯಂತ್ರಿಸಲಾಗುವುದು : ಗೃಹ ಸಚಿವ ಡಾ ಜಿ ಪರಮೇಶ್ವರ್ - Karavali Times

728x90

3 May 2025

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ಅಂದರ್ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೋಮು ವಿರೋಧಿ ಕಾರ್ಯಪಡೆ ರಚಿಸಿ ಸ್ವತಂತ್ರ ಅಧಿಕಾರ ನೀಡಿ ಪರಿಸ್ಥಿತಿ ನಿಯಂತ್ರಿಸಲಾಗುವುದು : ಗೃಹ ಸಚಿವ ಡಾ ಜಿ ಪರಮೇಶ್ವರ್

ಮಂಗಳೂರು, ಮೇ 03, 2025 (ಕರಾವಳಿ ಟೈಮ್ಸ್) : ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೋಮು ಸಂಬಂಧಿ ಘಟನೆಗಳಿಂದ ನಲುಗಿ ಹೋಗಿರುವ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಅವರು ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದರು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಹಿನ್ನಲೆಯಲ್ಲಿ ನಮ್ಮ ಸರಕಾರ ಸ್ಪಷ್ಟ ನಿರ್ಧಾರಕ್ಕೆ ಬಂದಿದ್ದು, ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು ರಚಿಸುತ್ತಿದ್ದೇವೆ. ಈ ಕಾರ್ಯಪಡೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದೆ. ಕೋಮುವಾದವನ್ನು ಬೆಂಬಲಿಸುವ ಅಥವಾ ಉತ್ತೇಜಿಸುವವರ ವಿರುದ್ಧ ಕೋಮು ವಿರೋಧಿ ಕಾರ್ಯಪಡೆ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೆÇಲೀಸರು 5 ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಈ ಸಂಬಂಧ ಈಗಾಲೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಎಂ ಡಿ ಮುಜಾಮಿಲ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ ಎಂದವರು ಹೇಳಿದರು. 

ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ. ಗುಂಪು ಹಲ್ಲೆ ಮತ್ತು ಸುಹಾಸ್ ಹತ್ಯೆ ಪ್ರಕರಣ ಎರಡೂ ಘಟನೆಗಳು ಕೋಮು ಸಾಮರಸ್ಯಕ್ಕೆ ಸವಾಲೊಡ್ಡುತ್ತವೆ. ನಾವು ಯಾವುದೇ ರೀತಿಯ ಕೋಮು ಶಕ್ತಿಗಳನ್ನು ಸಹಿಸುವುದಿಲ್ಲ. ನಮ್ಮ ಸರಕಾರ ಈ ಪ್ರದೇಶದಲ್ಲಿ ಶಾಂತಿ ಕಾಪಾಡಲು ಬದ್ಧವಾಗಿದೆ. ಈ ಘಟನೆಗಳ ಬಗ್ಗೆ ನಾವು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದೇವೆ. ನಕ್ಸಲ್ ವಿರೋಧಿ ಪಡೆಯಂತೆಯೇ ನಾವು ಕೋಮು ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸುತ್ತೇವೆ. ಇದು ಕೋಮು ಚಟುವಟಿಕೆಗಳನ್ನು ಮತ್ತು ಅವುಗಳನ್ನು ಬೆಂಬಲಿಸುವವರನ್ನು ಎದುರಿಸಲು ಸಮಗ್ರ ಅಧಿಕಾರವನ್ನು ಹೊಂದಿರುವ ಪ್ರತ್ಯೇಕ ವಿಭಾಗವಾಗಿರುತ್ತದೆ. ಪ್ರಚೋದನಕಾರಿ ಭಾಷಣಗಳು ಅಥವಾ ಹೇಳಿಕೆಗಳನ್ನು ನೀಡುವ ಯಾರಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಯಾವುದೇ ಕೋಮು ಭಾಷಣಗಳು, ದ್ವೇಷ ಭಾಷಣಗಳು ನಡೆದರೆ. ಕೋಮು ವಿರೋಧಿ ಶಕ್ತಿಗಳು ಕ್ರಮ ಕೈಗೊಂಡು ಕಠಿಣ ಕ್ರಮ ಕೈಗೊಳ್ಳಲು ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುವುದು ಎಂದ ಡಾ ಜಿ ಪರಮೇಶ್ವರ ಶೀಘ್ರದಲ್ಲೇ ರಚನೆಯಾಗಲಿರುವ ಕೋಮು ವಿರೋಧಿ ಕಾರ್ಯಪಡೆ ಹಿಂದಿನ ಕೋಮು ಗಲಭೆಗಳ ತನಿಖೆ ನಡೆಸುತ್ತದೆ. ಮುಂದೆ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೆÇಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ,ಅವರು ರಾಜಕೀಯ ನಾಯಕರಾಗಿದ್ದರೂ ಸಹ, ಅವರ ವಿರುದ್ಧ ಪೆÇಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಎಡಿಜಿಪಿ ಹಿತೇಶ್, ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸಹಿತ ಅಧಿಕಾರಿಗಳು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ಅಂದರ್ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೋಮು ವಿರೋಧಿ ಕಾರ್ಯಪಡೆ ರಚಿಸಿ ಸ್ವತಂತ್ರ ಅಧಿಕಾರ ನೀಡಿ ಪರಿಸ್ಥಿತಿ ನಿಯಂತ್ರಿಸಲಾಗುವುದು : ಗೃಹ ಸಚಿವ ಡಾ ಜಿ ಪರಮೇಶ್ವರ್ Rating: 5 Reviewed By: karavali Times
Scroll to Top