ಬಜ್ಪೆ : ತಂಡದಿಂದ ತಲವಾರು ದಾಳಿ, ರೌಡಿಶೀಟರ್ ಸುಹಾಸ್ ಶೆಟ್ಟಿ ದಾರುಣ ಸಾವು - Karavali Times ಬಜ್ಪೆ : ತಂಡದಿಂದ ತಲವಾರು ದಾಳಿ, ರೌಡಿಶೀಟರ್ ಸುಹಾಸ್ ಶೆಟ್ಟಿ ದಾರುಣ ಸಾವು - Karavali Times

728x90

1 May 2025

ಬಜ್ಪೆ : ತಂಡದಿಂದ ತಲವಾರು ದಾಳಿ, ರೌಡಿಶೀಟರ್ ಸುಹಾಸ್ ಶೆಟ್ಟಿ ದಾರುಣ ಸಾವು

 ಮಂಗಳೂರು, ಮೇ 02, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮಾನವ ಹತ್ಯೆ ಪ್ರಕರಣ ವರದಿಯಾಗಿದೆ. ಕುಡುಪು ಎಂಬಲ್ಲಿ ಮುಸ್ಲಿಂ ಯುವಕನ ಗುಂಪು ಹತ್ಯೆ ಘಟನೆ ಮನಸ್ಸಿನಿಂದ ಮಾಸುವ ಮುನ್ನವೇ ಬಜ್ಪೆ ಸಮೀಪ ಹಿಂದೂ ಪರ ಕಾರ್ಯಕರ್ತನ ಹತ್ಯೆ ಪ್ರಕರಣ ನಡೆದಿದ್ದು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಗಳೂರು ಹೊರವಲಯದ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಸಂಘಟಕ, ರೌಡಿ ಶೀಟರ್, ಸುರತ್ಕಲ್ ಫಾಝಿಕ್ ಕೊಲೆ ಪ್ರಕರಣ ಪ್ರಮುಖ ಆರೋಪಿ ಎನ್ನಲಾಗಿರುವ ಸುಹಾಸ್ ಶೆಟ್ಟಿ ಎಂಬಾತನನ್ನು ಗುರುವಾರ ರಾತ್ರಿ ಸುಮಾರು 8.40 ರ ವೇಳೆಗೆ ತಲವಾರು ಹೊಂದಿದ ನಾಲ್ವರ ಗುಂಪೊಂದು ಯದ್ವಾತದ್ವಾ ಕಡಿದು ಹಾಕಿದೆ. ಗಂಭೀರ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ಸ್ಥಳೀಯರು ತಕ್ಷಣ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಿದರೂ ಫಲಿಸದೆ ಆತ ಅಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಆಗಿದ್ದ  ಸುಹಾಸ್ ಶೆಟ್ಟಿಯನ್ನು ಪೂರ್ವದ್ವೇಷ ಹೊಂದಿದ್ದ ಯುವಕರ ತಂಡ ಈ ಕೃತ್ಯ ಎಸಗಿದೆ ಎಂದು ಶಂಕಿಸಲಾಗಿದೆ. 

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದ ಮತ್ತು ಆತನ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದ.

ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ. ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌‌. ಆಸ್ಪತ್ರೆಗೆ ಬಿಜೆಪಿ ನಾಯಕರು, ಹಿಂದು ಸಂಘಟನೆಗಳ ನಾಯಕರು ಕಾರ್ಯಕರ್ತರ ಸಹಿತ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.




  • Blogger Comments
  • Facebook Comments

0 comments:

Post a Comment

Item Reviewed: ಬಜ್ಪೆ : ತಂಡದಿಂದ ತಲವಾರು ದಾಳಿ, ರೌಡಿಶೀಟರ್ ಸುಹಾಸ್ ಶೆಟ್ಟಿ ದಾರುಣ ಸಾವು Rating: 5 Reviewed By: lk
Scroll to Top