ಬಂಟ್ವಾಳ, ಮೇ 25, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸನ್ಮಾನ್ ಬಾರ್ ಎದುರುಗಡೆ ಫ್ಲೈ ಓವರ್ ಕೆಳ ಭಾಗದಲ್ಲಿ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ ಸಿ ರೋಡು ಸಮೀಪದ ಪರ್ಲಿಯಾ-ಮದ್ದ ನಿವಾಸಿ ಬಿ ಎಂ ಇಬ್ರಾಹಿಂ (63) ಅವರು ಮೇ 5 ರಂದು ಮಧ್ಯಾಹ್ನ ಬಿ ಸಿ ರೋಡು ಸನ್ಮಾನ್ ಬಾರ್ ಎದುರುಭಾಗದ ಫ್ಲೈ ಓವರ್ ಕೆಳಗೆ ತನ್ನ ಆಕ್ಟಿವಾ ಹೋಂಡಾ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗುರುವಾಯನಕೆರೆ ಎಂಬಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸು ಬಂದು ನೋಡಿದಾಗ ದ್ವಿಚಕ್ರ ವಾಹನ ಕಾಣೆಯಾಗಿತ್ತು. ಈ ಬಗ್ಗೆ ಇದುವರೆಗೆ ಹುಡುಕಾಡಿದರೂ ಎಲ್ಲಿಯೂ ಪತ್ತೆಯಾಗದ ಹಿನ್ನಲೆಯಲ್ಲಿ ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕಳವಾಗಿರುವ ದ್ವಿಚಕ್ರ ವಾಹನದ ಮೌಲ್ಯ 20 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment