ಬಂಟ್ವಾಳ, ಮೇ 02, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಗಂಡಸಿನ ಮೃತದೇಹವೊಂದು ಬುಧವಾರ ಸಂಜೆ ಪತ್ತೆಯಾಗಿದೆ.
ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಮಯ ನೇತ್ರಾವತಿ ನದಿಯ ತಟದ ನೀರಿನಲ್ಲಿ ಮೃತದೇಹ ತೇಲಿಕೊಂಡಿರುವುದನ್ನು ನೋಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪರಿಚಯ ಲಭ್ಯವಾಗಿಲ್ಲದೆ ಇದ್ದು, ಈ ಬಗ್ಗೆ ಪೆÇಲೀಸರಿಗೆ ಮಾಹಿತಿ ನೀಡಿ ಬಳಿಕ ಈಜುಗಾರರ ಸಹಾಯದಿಂದ ಮೃತ ದೇಹವನ್ನು ನದಿ ದಡಕ್ಕೆ ತರಲಾಗಿದೆ ಎಂದು ನೀಡಿದ ದೂರಿನಂತೆ ಬಂಟ್ವಾಳ ನಗರ ಪೆÇಲೀಸ್ ಠಾಣೆ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment