ಮಂಗಳೂರು, ಜೂನ್ 05, 2025 (ಕರಾವಳಿ ಟೈಮ್ಸ್) : ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕಾರುಗಳ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ ಚಾಲಕರ ವಿರುದ್ದ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸುವ ಪ್ರಕ್ರಿಯೆ ನಡೆಸಿದ್ದಾರೆ. ಈ ವಿಶೇಷ ಕಾರ್ಯಾಚರಣೆಯು ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ ಹಾಗೂ ಬ್ಲ್ಯಾಕ್ ಫಿಲ್ಮಂಗಳನ್ನು ಆಳವಡಿಸುವವರ ವಿರುದ್ದ ಕ್ರಮ ಕೈಗೊಳ್ಳಲು ಮತ್ತು ಸದ್ರಿ ಟಿಂಟೆಡ್ ಗ್ಲಾಸ್ ಗಳನ್ನು ತೆರವುಗೊಳಿಸುವಂತೆ ಆದೇಶಿಸಿರುವುದನ್ನು ಪಾಲಿಸುವುದು, ವಾಹನಗಳ ಗಾಜುಗಳಿಗೆ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಇತರೆ ವಸ್ತುಗಳನ್ನು ಅಂಟಿಸುವಂತಿಲ್ಲ, ಸಾರ್ವಜನಿಕರು ತಮ್ಮ ವಾಹನಗಳಿಗೆ ಅಳವಡಿಸಲಾಗಿರುವ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಇತರೆ ವಸ್ತುಗಳನ್ನು ಸ್ವತಃ ತೆಗೆದು ಪೆÇಲೀಸ್ ಇಲಾಖೆಯೊಂದಿಗೆ ಸಹಕರಿಸುವುದು, ಸಾರ್ವಜನಿಕರು ಯಾವುದೇ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಅಳವಡಿಸಿರುವುದು ಕಂಡು ಬಂದಲ್ಲಿ, ಕಾರಿನ ನೊಂದಣಿ ಸಂಖ್ಯೆ, ದಿನಾಂಕ ಮತ್ತು ಸಮಯದ ಹಾಗೂ ಸಾಧ್ಯವಾದಲ್ಲಿ ಪೆÇೀಟೋ ಹಾಗೂ ಸ್ಥಳದ ವಿವರಗಳ ಮಾಹಿತಿಯನ್ನು ನಗರ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 9480802321 ಅಥವಾ ಟ್ರಾಫಿಕ್ ಎಸಿಪಿ ಮೊಬೈಲ್ ಸಂಖ್ಯೆ 9480802312 ಗೆ ಸಂಪರ್ಕಿಸಿ ಅಥವಾ ವಾಟ್ಸಪ್ ಮೂಲಕ ಹಂಚಿಕೊಂಡಲ್ಲಿ ತಕ್ಷಣ ಕ್ರಮ ಕೈಗೊಳ್ಳಲಗುವುದು ಎಂದು ನಗರ ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment