ಬಂಟ್ವಾಳ, ಜೂನ್ 30, 2025 (ಕರಾವಳಿ ಟೈಮ್ಸ್) : ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬಿ ಸಿ ರೋಡು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದ ಮುಂಭಾಗ ಅಜ್ಜಿಬೆಟ್ಟು ಕ್ರಾಸ್ ಎಂಬಲ್ಲಿನ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಕೆಲಸ ಮಾಡುವ ಶಂಭೂರು ಗ್ರಾಮದ ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಹೆಸರಿಸಲಾಗಿದೆ. ಇವರು ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟ್ಯಾಂಕರಿನ ಚಕ್ರದಡಿ ಸಿಲುಕಿದ ಚಿದಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತರು ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿರುವ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment