ಬಂಟ್ವಾಳ, ಜೂನ್ 18, 2025 (ಕರಾವಳಿ ಟೈಮ್ಸ್) : ಸ್ಕೂಲ್ ಬಸ್ಸಿಗಾಗಿ ರಸ್ತೆ ಬದಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುದು ಗ್ರಾಮದ ಫರಂಗಿಪೇಟೆ ಮಸೀದಿ ಎದುರು ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯ ನಿವಾಸಿ ಜಸ್ರಿಯಾ (5) ಎಂದು ಹೆಸರಿಸಲಾಗಿದೆ. ಈ ಬಗ್ಗೆ ಪುದು ನಿವಾಸಿ ಅಝ್ ಮೀನಾ ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮಂಗಳವಾರ ಬೆಳಿಗ್ಗೆ ಫರಂಗಿಪೇಟೆ ಮಸೀದಿ ಎದುರು ತನ್ನ ಮಕ್ಕಳು ಹಾಗೂ ಭಾವನ ಮಗಳು ಜಸ್ರಿಯಾ ಅವರನ್ನು ಶಾಲೆಗೆ ಕಳುಹಿಸಲು ರಸ್ತೆ ಬದಿ ನಿಂತು ಸ್ಕೂಲ್ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಬಿ ಸಿ ರೋಡು ಕಡೆಯಿಂದ ಬಂದ ಕೃತಿಕ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಜಸ್ರಿಯಾ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಾಯವಾಗಿರುತ್ತದೆ. ಆಕೆಯನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment