ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್ : ಕಾಸರಗೋಡು ನಿವಾಸಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್ : ಕಾಸರಗೋಡು ನಿವಾಸಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

5 June 2025

ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್ : ಕಾಸರಗೋಡು ನಿವಾಸಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

 ಪುತ್ತೂರು, ಜೂನ್ 05, 2025 (ಕರಾವಳಿ ಟೈಮ್ಸ್) : ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಕಾಸರಗೋಡು-ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೆÇೀಸ್ಟ್ ಗಳನ್ನು ಪ್ರಸಾರ ಮಾಡಿದ್ದು, ಈತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಗುರುವಾರ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2025 ಕಲಂ 353(2), 196(1)(ಎ) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್ : ಕಾಸರಗೋಡು ನಿವಾಸಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top