ಮಂಗಳೂರು, ಜೂನ್ 13, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಕಾಮಗಾರಿಯ ಸ್ಥಳಕ್ಕೆ ಗೃಹ ಮಂತ್ರಿ ಡಾ ಜಿ ಪರಮೇಶ್ವರ್ ಅವರು ಶುಕ್ರವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರುಗಳಾದ ಡಾ ಮಂಜುನಾಥ್ ಭಂಡಾರಿ, ಐವನ್ ಡಿ ಸೋಜಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಬಂಧಿಖಾನೆ ಇಲಾಖೆಯ ಡಿಐಜಿ ಕೆ.ಸಿ. ದಿವ್ಯಶ್ರೀ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಜೊತೆಗಿದ್ದರು.
0 comments:
Post a Comment