ಬೆಂಗಳೂರು, ಜೂನ್ 04, 2025 (ಕರಾವಳಿ ಟೈಮ್ಸ್) : ಸುದೀರ್ಘ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಮಧ್ಯಾಹ್ನ ಬೆಂಗಳೂರು ತಲುಪಿದೆ. ಬೆಂಗಳೂರಿಗೆ ಆಗಮಿಸಿದ ತಂಡವನ್ನು ಸರಕಾರದ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಲ್ಲಿನ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದೇ ವೇಳೆ ಐಪಿಎಲ್ ಚಾಂಪಿಯನ್ ಆಗಿ ತವರಿಗೆ ಬಂದಿಳಿದ ಆರ್ ಸಿ ಬಿ ತಂಡಕ್ಕೆ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.
ಆರ್‍ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ಸಂಜೆ 6 ಗಂಟೆಗೆ ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ.
ಬೆಂಗಳೂರಿಗೆ ಬಂದ ಆರ್ ಸಿ ಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲಿಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಂದ ಸಂಜೆ 4 ಗಂಟೆಗೆ ವಿಧಾನಸೌಧಕ್ಕೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.
ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ಈ ಹಿಂದೆ ತೀರ್ಮಾನವಾಗಿತ್ತು. ಆದರೆ ಭದ್ರತಾ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್‍ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಆರ್‍ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್‍ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್ಸಿನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ. ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾ£ಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ತಿಳಿಸಲಾಗಿದೆ.
ವಿಧಾನಸೌಧದ ಮುಂದೆ ಆರ್ ಸಿ ಬಿ ತಂಡಕ್ಕೆ ಸರಕರದಿಂದ ಸನ್ಮಾನ, ಪೆÇ್ರೀತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ನಗರದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
0 comments:
Post a Comment