ಬಂಟ್ವಾಳ, ಜೂನ್ 02, 2025 (ಕರಾವಳಿ ಟೈಮ್ಸ್) : ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಮೇ ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳ ಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅಲ್ಲಿ ನೆರೆದಿದ್ದ ಸುಮಾರು 500 ಮಂದಿಯನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ ಎನ್ನಲಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ಸೋಮವಾರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 60/2025, ಕಲಂ 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
0 comments:
Post a Comment