ಬೆಂಗಳೂರು, ಜೂನ್ 24, 2025 (ಕರಾವಳಿ ಟೈಮ್ಸ್) : ಕರ್ನಾಟಕದಲ್ಲಿ ಮಂಗಳವಾರದಿಂದ ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂದಿನ ಮೂರು ದಿನ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೆಲ ದಿನಗಳಿಂದ ಒಂದಷ್ಟು ನಿಧಾನವಾಗಿದ್ದ ಮಳೆರಾಯ ಮತ್ತೆ ಬಿರುಸಾಗುವ ಸೂಚನೆ ನೀಡಿದ್ದಾನೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆಯಾಗಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆ ಮತ್ತು ಮೋಡ ಕವಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
0 comments:
Post a Comment