ಕಡಬ, ಜೂನ್ 10, 2025 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ಮಂಗಳವಾರ ನಡೆದಿದೆ.
ಬಂಧಿತರನ್ನು ಕಡಬ ನಿವಾಸಿಗಳಾದ ರಾಧಾಕೃಷ್ಣ (52), ಮೋಹನದಾಸ (48) ಹಾಗೂ ವೆಂಕಟರಮಣ (30) ಎಂದು ಗುರುತಿಸಲಾಗಿದೆ. ಕಡಬ ಪೆÇಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಕಡಬ ಪೆÇಲೀಸ್ ಠಾಣಾ ಪಿಸ್ಸೈ ಅಭಿನಂದನ್ ಅವರ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿರುತ್ತದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment