ಜುಲೈ 9 ರ ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೆಡ್ ಪಿ.ಪಿ ಅಪ್ಪಣ್ಣ ಕರೆ - Karavali Times ಜುಲೈ 9 ರ ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೆಡ್ ಪಿ.ಪಿ ಅಪ್ಪಣ್ಣ ಕರೆ - Karavali Times

728x90

29 June 2025

ಜುಲೈ 9 ರ ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೆಡ್ ಪಿ.ಪಿ ಅಪ್ಪಣ್ಣ ಕರೆ

 ಬಂಟ್ವಾಳ, ಜೂನ್ 29, 2025 (ಕರಾವಳಿ ಟೈಮ್ಸ್) : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ಯಶಸ್ವಿಗೊಳಿಸಲು ಎಐಸಿಸಿಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಬಿಸಿರೋಡಿನ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ರಾಜ್ಯಾಧ್ಯಕ್ಷ ಕಾಮ್ರೇಡ್ ಪಿ ಪಿ ಅಪ್ಪಣ್ಣ, ಕೇಂದ್ರದ ಬಿಜೆಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಪೆರ್Çೀರೇಟ್ ಧಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮೋದಿ ಸರಕಾರ ಕಾರ್ಮಿಕರ ಎಂಟು ಗಂಟೆಗಳ ಕೆಲಸದ ಹಕ್ಕನ್ನು ಕಿತ್ತುಹಾಕಿ ವಾರದಲ್ಲಿ ಎಪ್ಪತ್ತು ಗಂಟೆ ದುಡಿಯುವಂತೆ ಕಾಯ್ದೆಯ ಮೂಲಕ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದರು.

ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದಿಂದ ಜಾರಿಯಾದ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು ಈ ಸಂಹಿತೆಗಳು ಜಾರಿಯಾದರೆ ಕಾರ್ಮಿಕರು ಕಾಪೆರ್Çರೇಟ್ ವರ್ಗದ ಗುಲಾಮರಾಗಬೇಕಾಗುತ್ತದೆ ಹಾಗೂ ಕಾರ್ಮಿಕರ ಎಲ್ಲಾ ಹಕ್ಕುಗಳು ಕಸಿಯಲ್ಪಡುತ್ತದೆ ಎಂದರು. ಈ ನಿಟ್ಟಿನಲ್ಲಿ ಜುಲೈ 9ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಪಾಲ್ಗೊಂಡು ಮುಷ್ಕರ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಎಐಸಿಸಿಟಿಯು ಜಿಲ್ಲಾಧ್ಯಕ್ಷ ರಾಮಣ್ಣ ವಿಟ್ಲ ಮಾತನಾಡಿ, ಕಾರ್ಮಿಕ ವರ್ಗ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕೆಂದರು. 

ಎಐಸಿಸಿಟಿಯು ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ ಇ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ವಿನಯ ನಡುಮೊಗರು, ಅಖಿಲ ಭಾರತ ಕಿಸಾನ್ ಮಹಾಸಭಾದ ಮುಖಂಡರಾದ ಮಹಮ್ಮದ್ ಇಕ್ಬಾಲ್ ಹಳೆಮನೆ, ಮಹಾವೀರ್ ಜೈನ್ ಪುತ್ತೂರು, ಸಂಜೀವ ಬೆಳ್ತಂಗಡಿ, ಸುಲೈಮಾನ್ ಕೆಳಿಂಜ, ಎಐಸಿಸಿಟಿಯು ಜಿಲ್ಲಾ ಮುಖಂಡರಾದ ಭರತ್ ಕುಮಾರ್, ಸತೀಶ್ ಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ ಮೊದಲಾದವರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

  • Blogger Comments
  • Facebook Comments

0 comments:

Post a Comment

Item Reviewed: ಜುಲೈ 9 ರ ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೆಡ್ ಪಿ.ಪಿ ಅಪ್ಪಣ್ಣ ಕರೆ Rating: 5 Reviewed By: karavali Times
Scroll to Top