ಬಂಟ್ವಾಳ, ಜೂನ್ 25, 2025 (ಕರಾವಳಿ ಟೈಮ್ಸ್) : ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಪಾಣೆಮಂಗಳೂರು ರಾಣಾ ಮಾರ್ಬಲ್ ಬಳಿ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ವೀರೇಶ್ ಎಂದು ಹೆಸರಿಸಲಾಗಿದೆ. ಕಲ್ಲಡ್ಕ ಕಡೆಗೆ ಸಂಚರಿಸುತ್ತಿದ್ದ ಬೈಕ್ ಸವಾರ ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಕಾರನ್ನು ತಪ್ಪಿಸುವ ಭರದಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿ ಎದುರು ಕಡೆಯಿಂದ ಲಕ್ಷ್ಮೀಶ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು, ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment