ಮಂಗಳೂರು, ಜೂನ್ 25, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ ಹಾಗೂ ಕಮಾಂಡ್ ಸೆಂಟರಿನಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ವಾಹನ ಚಾಲಕರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.
ವಾಹನ ಚಾಲಕರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು ಬಾಕಿ ಇರುತ್ತದೆ. ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ದ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದು, ಪ್ರಥಮ ಹಂತವಾಗಿ ದಂಡ ಪಾವತಿ ಮಾಡಲು ವಾಹನ ನೋಂದಣಿ ಮಾಲಿಕರಿಗೆ ಈಗಾಗಲೇ ಅಂಚೆ ಮೂಲಕ ನೋಟಿಸ್ ಕಳುಹಿಸಲಾಗಿದೆ. ಜುಲೈ 15ರೊಳಗಾಗಿ ದಂಡ ಪಾವತಿಸಲು ವಿಫಲರಾದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಕುರಿತು ನೋಂದಣಿ ಮಾಲಕರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗುವುದು. ನಂತರ ನ್ಯಾಯಾಲಯದಿಂದ ಹೊರಡಿಸುವ ಸಮನ್ಸ್/ ವಾರಂಟು ಪ್ರಕ್ರಿಯೆಗಳು ಮುಂದುವರೆಯುತ್ತದೆ.
ಇದರಿಂದಾಗಿ ನೋಟಿಸ್ ಸ್ವೀಕೃತಿಯಾಗಿರುವ ವಾಹನದ ನೋಂದಣಿ ಮಾಲಕರು ದಂಡವನ್ನು ಪಾವತಿ ಮಾಡಿ, ಮುಂದೆ ಆಗುವ ಪರಿಣಾಮಗಳಿಗೆ ಅವಕಾಶವನ್ನು ನೀಡದಂತೆ ಕೋರಲಾಗಿದೆ. ನಿಮ್ಮ ವಾಹನವು ಮಂಗಳೂರು ನಗರದಲ್ಲಿ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದೆಯೇ ಎಂದು ಪರಿಶೀಲಿಸಲು ಮತ್ತು ದಂಡ ಪಾವತಿಸಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಟ್ರಾಫಿಕ್ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಥವಾ ದೂರವಾಣಿ ಕರೆ ಮಾಡಿ ವಿಚಾರಿಸಲು, ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.
ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೆÇಲೀಸ್ ಅಧಿಕಾರಿಗಳಲ್ಲಿ ಇರುವ ಡಿವೈಸ್‍ಗಳಲ್ಲಿ ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಯಾವುದೇ ಅಂಚೆ ಕಛೇರಿಯಲ್ಲಿ ವಿಚಾರಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ. ತಮ್ಮ ಸಮೀಪದ ಯಾವುದೇ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿಯೂ ದಂಡ ಪಾವತಿ ಮಾಡಬಹುದಾಗಿರುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅವರ ಪ್ರಕಟಣೆ ತಿಳಿಸಿದೆ.
0 comments:
Post a Comment