ಬಂಟ್ವಾಳ, ಜೂನ್ 22, 2025 (ಕರಾವಳಿ ಟೈಮ್ಸ್) : ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಪುದು ಗ್ರಾಮದ ಮಾರಿಪಳ್ಳ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಶನಿವಾರ ಸಂಜೆ ಸಂಭವಿಸಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಆದಂ ಬ್ಯಾರಿ ಎಂಬವರ ಪುತ್ರ ಇಬ್ರಾಹಿಂ ಎನ್ (47) ಎಂದು ಹೆಸರಿಸಲಾಗಿದೆ.
ಇವರು ತನ್ನ ಸ್ಕೂಟರಿನಲ್ಲಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಮನೆ ಕಡೆಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ಭೀಕರತೆಗೆ ಸ್ಕೂಟರ್ ಸವಾರ ಇಬ್ರಾಹಿಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೇ ಸ್ಥಳದಲ್ಲಿ ಕಳೆದ ಜೂನ್ 6 ರಂದು ಶುಕ್ರವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದ ಯುವಕನೋರ್ವನಿಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿತ್ತು. ಅಪಘಾತದಲ್ಲಿ ಸ್ಥಳೀಯ ನಿವಾಸಿ ಜಾಹಿದ್ ಯಾನೆ ಜಾಯಿ (27) ಎಂಬಾತ ಮೃತಪಟ್ಟಿದ್ದ.


















0 comments:
Post a Comment