ಅಹ್ಮದಾಬಾದ್, ಜೂನ್ 12, 2025 (ಕರಾವಳಿ ಟೈಮ್ಸ್) : ಗುಜರಾತಿನ ಅಹ್ಮದಾಬಾದಿನಲ್ಲಿ ಪತನವಾದ ಏರ್ ಇಂಡಿಯಾ ವಿಮಾನ ದುರಂತ ಘಟನೆಯಲ್ಲಿ ಓರ್ವ ಪ್ರಯಾಣಿಕನನ್ನು ಬಿಟ್ಟು ಉಳಿದೆಲ್ಲರೂ ಮೃತಪಟ್ಟಿದ್ದಾರೆ ಎಂದು ಪೆÇಲೀಸ್ ಮೂಲಗಳು ಮಾಹಿತಿ ನೀಡಿದ್ದು, ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ದುರಂತ ಸಾವನ್ನಪ್ಪಿದ್ದಾರೆ.
ಗುಜರಾತ್ ರಾಜಧಾನಿ ಅಹಮದಾಬಾದ್ ಏರ್‍ಪೆÇೀರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ ಎನ್ನಲಾಗುತ್ತಿದೆ. ಏರ್ ಪೆÇೀರ್ಟ್ ಬಳಿ ಮೇಧಿನಿ ನಗರ್ ನಲ್ಲಿ ಈ ದುರಂತ ಘಟನೆ ಸಂಭವಿಸಿದ್ದು ಬೋಯಿಂಗ್ 787-8 ಡ್ರೀಮ್‍ಲೈನರ್ (ಎಐ-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‍ಗೆ ತೆರಳುತ್ತಿತ್ತು ಎನ್ನಲಾಗಿದೆ. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೆÇೀರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.
ದುರಂತದಲ್ಲಿ ಒಟ್ಟು 246 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 229 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ (ಮುಖ್ಯ ಪೈಲಟ್ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್ ಕುಂದರ್) ಗಳು ಸೇರಿದ್ದರು. ವಿಮಾನದಲ್ಲಿದ್ದ 242 ಜನರಲ್ಲಿ 169 ಮಂದಿ ಭಾರತೀಯ ಪ್ರಜೆಗಳು, 53 ಮಂದಿ ಬ್ರಿಟಿಷ್ ಪ್ರಜೆಗಳು, 7 ಮಂದಿ ಪೆÇೀರ್ಚುಗೀಸ್ ಪ್ರಜೆಗಳು ಹಾಗೂ ಓರ್ವ ಕೆನಡಾ ಪ್ರಜೆ ಇದ್ದರು ಎಂದು ತಿಳಿದುಬಂದಿದೆ. ಇದಲ್ಲದೆ ವಿಮಾನ ಢಿಕ್ಕಿಯಾದ ಬಿಜೆ ವೈದ್ಯಕೀಯ ಕಾಲೇಜಿನ 5 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳೂ ಸಾವನ್ನಪ್ಪಿದ್ದಾರೆ. ದುರಂತ ನಡೆದ ಸಂದರ್ಭದಲ್ಲಿ ವಿಮಾನ ಕೇವಲ 825 ಅಡಿ ಎತ್ತರದಲ್ಲಿತ್ತು ಎನ್ನಲಾಗಿದೆ.
ಇದೇ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಜಯ್ ರೂಪಾನಿ ಅವರು ಕುಟುಂಬ ಸದಸ್ಯರನ್ನು ಭೇಟಿಯಾಗಲು ಲಂಡನ್ ತೆರಳುತಿದ್ದರು ಎಂದು ತಿಳಿದುಬಂದಿದೆ.
ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಘಟಿಸಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ ಎಂದು ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕೂಡ ಹಾಟ್ ಲೈನ್ ಸಂಖ್ಯೆ ಬಿಡುಗಡೆ ಮಾಡಿದ್ದು, ಹೆಚ್ಚಿನ ಮಾಹಿತಿ ನೀಡಲು ನಾವು 1800 5691 444 ಎಂಬ ಪ್ರಯಾಣಿಕರ ಹಾಟ್‍ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದ್ದೇವೆ ಎಂದು ತಿಳಿಸಿದೆ.
ಏರ್ ಇಂಡಿಯಾ ವಿಮಾನ ಎಐ-171 ಕುರಿತು ‘ವಿಮಾನ ಅಪಘಾತ ತನಿಖಾ ಸಂಸ್ಥೆ’ (ಎಎಐಬಿ) ತನಿಖೆ ಆರಂಭಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಎಐಬಿ ಮಹಾನಿರ್ದೇಶಕ ಮತ್ತು ಸಂಸ್ಥೆಯ ತನಿಖಾ ನಿರ್ದೇಶಕ ಸೇರಿದಂತೆ ಇತರರು ಅಹಮದಾಬಾದ್‍ಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರತದ ವಾಯು ಪ್ರದೇಶದಲ್ಲಿ ಸಂಭವಿಸುವ ವಿಮಾನಗಳ ಅಪಘಾತ ಮತ್ತು ಗಂಭೀರ ಸ್ವರೂಪದ ಘಟನೆಗಳಿಗೆ ಸಂಬಂಧಿಸಿದಂತೆ ಸುರಕ್ಷತಾ ಮಾನದಂಡಗಳ ವಿಂಗಡನೆಯ ಹೊಣೆ ಎಎಐಬಿಯದ್ದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ. ಅಪಘಾತಗಳ ಕುರಿತು ಸಮಗ್ರ ತನಿಖೆ ನಡೆಸಲಿರುವ ಎಎಐಬಿ, ಸುರಕ್ಷತಾ ಮಾನದಂಡಗಳನ್ನು ಸುಧಾರಿಸಲು ನಿರ್ದೇಶನ ನೀಡಲಿದೆ.
















0 comments:
Post a Comment