ಮಂಗಳೂರು, ಜೂನ್ 24, 2025 (ಕರಾವಳಿ ಟೈಮ್ಸ್) : ನಗರದ ಬಿಜೈನಲ್ಲಿರುವ ಪಿಂಟೋ ಚೇಂಬರ್ಸ್ ಕಟ್ಟಡದ 2ನೇ ಮಹಡಿಯಲ್ಲಿರುವ ಉಡುಪಿಯ ಬ್ರಹ್ಮಗಿರಿಯ ನಿವಾಸಿ ಸುದರ್ಶನ್ ಅವರ ಒಡೆತನದ ಸಿಕ್ಸ್ತ್ ಸೆನ್ಸ್ ಬ್ಯೂಟಿ ಸೆಲೂನಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೆÇಲೀಸರು ದಾಳಿ ನಡೆಸಿದ್ದಾರೆ.
ಈ ಬಗ್ಗೆ ಉರ್ವಾ ಪೆÇಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2025 ರ ಅಡಿಯಲ್ಲಿ ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 3(1), 4, 5 ಮತ್ತು 6 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಲ್ಲದೆ ಸದರಿ ಬ್ಯೂಟಿ ಸೆಲೂನಿಗೆ ನೀಡಲಾದ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡುವ ವರದಿಯನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಗಿದ್ದು, ಸದ್ರಿ ವರದಿಯ ಮೇರೆಗೆ ಕಾರ್ಯನಿರ್ವಹಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನಿನ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
0 comments:
Post a Comment