ಕರಾವಳಿಯಲ್ಲಿ ಕೋಮು ಸಂಘರ್ಷ ಹತ್ತಿಕ್ಕಲು ಕೊನೆಗೂ ಸರಕಾರದಿಂದ ಕ್ರಮ : ಠಾಣೆಯಲ್ಲಿ ಕೇಸು ದಾಖಲು : ಸ್ಪೆಷಲ್ ಆಕ್ಷನ್ ಫೋರ್ಸ್ ಅಸ್ತಿತ್ವಕ್ಕೆ - Karavali Times ಕರಾವಳಿಯಲ್ಲಿ ಕೋಮು ಸಂಘರ್ಷ ಹತ್ತಿಕ್ಕಲು ಕೊನೆಗೂ ಸರಕಾರದಿಂದ ಕ್ರಮ : ಠಾಣೆಯಲ್ಲಿ ಕೇಸು ದಾಖಲು : ಸ್ಪೆಷಲ್ ಆಕ್ಷನ್ ಫೋರ್ಸ್ ಅಸ್ತಿತ್ವಕ್ಕೆ - Karavali Times

728x90

13 June 2025

ಕರಾವಳಿಯಲ್ಲಿ ಕೋಮು ಸಂಘರ್ಷ ಹತ್ತಿಕ್ಕಲು ಕೊನೆಗೂ ಸರಕಾರದಿಂದ ಕ್ರಮ : ಠಾಣೆಯಲ್ಲಿ ಕೇಸು ದಾಖಲು : ಸ್ಪೆಷಲ್ ಆಕ್ಷನ್ ಫೋರ್ಸ್ ಅಸ್ತಿತ್ವಕ್ಕೆ

 ಮಂಗಳೂರು, ಜೂನ್ 13, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಕೋಮು ಸಂಘರ್ಷವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಘೋಷಿಸಿದಂತೆ “ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್ ಎ ಎಫ್)” ವಿಶೇಷ ಕಾರ್ಯಪಡೆಗೆ ಮಂಗಳೂರಿನಲ್ಲಿ ಶುಕ್ರವಾರ ರಾಜ್ಯ ಗೃಹ ಮಂತ್ರಿ ಡಾ ಜಿ ಪರಮೇಶ್ವರ್ ಚಾಲನೆ ನೀಡಿದರು. 

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್  ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. 

ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಪೊಲೀಸ್ ವಿಶೇಷ ಕಾರ್ಯಪಡೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು, 248 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಪ್ರತಿ ಕಂಪನಿಯಲ್ಲಿ 80 ಸಿಬ್ಬಂದಿ ಇರಲಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಹೆಗಲಿಗೆ ಈ ವಿಶೇಷ ಕಾರ್ಯ ಪಡೆಯ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಡಲಾಗಿದೆ. ಮಂಗಳೂರು ನಗರ ಕೇಂದ್ರದಲ್ಲಿಯೇ ಈ  ಕಾರ್ಯಪಡೆಯ ಕೇಂದ್ರ ಕಚೇರಿ ಇರಲಿದ್ದು, ನಕ್ಸಲ್ £ಗ್ರಹ ಪಡೆಯಲ್ಲಿದ್ದ 656 ಸಿಬ್ಬಂದಿಗಳ ಪೈಕಿ 248 ಮಂದಿಯನ್ನು ಈ ಹೊಸ ಪಡೆಗೆ ನಿಯೋಜನೆ ಮಾಡಲಾಗಿದೆ.

ಈ ಸಂದರ್ಭ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಎಸ್‍ಎಎಫ್ ಅಗತ್ಯವಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ರೆ ರಾಜ್ಯದಲ್ಲಿ ಶಾಂತಿ ಇರುತ್ತೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಯಾರೂ ಇದೇ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಇದನ್ನೇ ದೊಡ್ಡದು ಮಾಡಿ ವಿಭಜನೆ ಮಾಡುವುದು ಸರಿಯಲ್ಲ. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸಂದರ್ಭ ಸ್ಪೀಕರ್ ಯು ಟಿ ಖಾದರ್ ಫರೀದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,  ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರುಗಳಾದ ಡಾ ಮಂಜುನಾಥ್ ಭಂಡಾರಿ, ಐವನ್ ಡಿ ಸೋಜಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರಗನ್, ಪಶ್ಚಿಮ ವಲಯ ಐಜಿಪಿ ಡಾ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಹಿತ ವಿವಿಧ ಗಣ್ಯರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿಯಲ್ಲಿ ಕೋಮು ಸಂಘರ್ಷ ಹತ್ತಿಕ್ಕಲು ಕೊನೆಗೂ ಸರಕಾರದಿಂದ ಕ್ರಮ : ಠಾಣೆಯಲ್ಲಿ ಕೇಸು ದಾಖಲು : ಸ್ಪೆಷಲ್ ಆಕ್ಷನ್ ಫೋರ್ಸ್ ಅಸ್ತಿತ್ವಕ್ಕೆ Rating: 5 Reviewed By: karavali Times
Scroll to Top