ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸ್ : 24 ಜಾನುವಾರುಗಳ ಸಹಿತ ಕಂಟೈನರ್ ವಶಕ್ಕೆ - Karavali Times ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸ್ : 24 ಜಾನುವಾರುಗಳ ಸಹಿತ ಕಂಟೈನರ್ ವಶಕ್ಕೆ - Karavali Times

728x90

2 June 2025

ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸ್ : 24 ಜಾನುವಾರುಗಳ ಸಹಿತ ಕಂಟೈನರ್ ವಶಕ್ಕೆ

ಮಂಗಳೂರು, ಜೂನ್ 02, 2025 (ಕರಾವಳಿ ಟೈಮ್ಸ್) : ಕೇರಳದಿಂದ ಕರ್ನಾಟಕ ಕಡೆಗೆ ಕಂಟೈನರ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ 24 ಜಾನುವಾರುಗಳನ್ನು ರಕ್ಷಿಸಿದ ಘಟನೆ ತಲಪಾಡಿ ಟೋಲ್ ಗೇಟ್ ಬಳಿ ಭಾನುವಾರ ನಡೆದಿದೆ. 

ಕೇರಳದಿಂದ ಕರ್ನಾಟಕದ ಕಡೆಗೆ ಜಾನುವಾರ ಸಾಗಾಟದ ಮಾಹಿತಿ ತಿಳಿದ ಪೊಲೀಸರು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಭಾನುವಾರ ಮುಂಜಾನೆ ತಲಪಾಡಿ ಟೋಲ್ ಗೇಟ್ ಬಳಿ ಪ್ರಕರಣ ಬೇಧಿಸಿದ್ದಾರೆ. ಕಾರ್ಯಾಚರಣೆ ವೇಳೆ ವಾಹನದ ಚಾಲಕನನ್ನು ಬಂಧಿಸಿ 24 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೈನರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 82/2025ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಶಕ್ಕೆ ಪಡೆದ ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸ್ : 24 ಜಾನುವಾರುಗಳ ಸಹಿತ ಕಂಟೈನರ್ ವಶಕ್ಕೆ Rating: 5 Reviewed By: karavali Times
Scroll to Top