ಬಂಟ್ವಾಳ, ಜುಲೈ 21, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27 ರಂದು ಅಪರಾಹ್ನ ವೇಳೆ ನಡೆದ ಅಬ್ದುಲ್ ರಹಿಮಾನ್ ಎಂಬವರ ಹತ್ಯೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಮತ್ತೋರ್ವ ಆರೋಪಿ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಅಲಿಯಾಸ್ ಸಾಹಿತ್ (24) ಎಂಬಾತನನ್ನು ಸೋಮವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಒಟ್ಟು ಸಂಖ್ಯೆ 11ಕ್ಕೇರಿದೆ.
ಈಗಾಗಲೇ ಪ್ರಕರಣದಲ್ಲಿ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ನಿವಾಸಿ ರವಿರಾಜ್ (23), ತೆಂಕಬೆಳ್ಳೂರು ಗ್ರಾಮದ ನಿವಾಸಿ ಅಭಿನ್ ರೈ (32), ಬಡಗಬೆಳ್ಳೂರು ಗ್ರಾಮದ ನಿವಾಸಿ ತೇಜಾಕ್ಷ (24), ಶೃಂಗೇರಿ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29), ತುಂಬೆ ನಿವಾಸಿ ಶಿವಪ್ರಸಾದ್ (33) ಹಾಗೂ ಪುದು ಗ್ರಾಮದ ನಿವಾಸಿ ಪ್ರದೀಪ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
0 comments:
Post a Comment