ಬಂಟ್ವಾಳ, ಜುಲೈ 07, 2025 (ಕರಾವಳಿ ಟೈಮ್ಸ್) : ಮಾರುತಿ ಸೂಪರ್ ಕ್ಯಾರಿ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಸೋಣಂದೂರು ಗ್ರಾಮದ ಸಬರಬೈಲು ಎಂಬಲ್ಲಿ ಜೂನ್ 28 ರಂದು ಸಂಭವಿಸಿದ್ದು, ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಬೈಕ್ ಸವಾರನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ತಾಲೂಕು, ಕಂಬಾಳು-ನಾರಾಯಣಪುರ ನಿವಾಸಿ ಅನಂತರಾಜು ಎಂದು ಹೆಸರಿಸಲಾಗಿದೆ. ಧರ್ಮಸ್ಥಳಕ್ಕೆ ಬಂದಿದ್ದ ಇವರು ಅಲ್ಲಿಂದ ಉಜಿರೆಗೆ ಬಂದು ತನ್ನ ಮೊಬೈಲ್ ರಿಪೇರಿ ಮಾಡಿಕೊಂಡು ಬಳಿಕ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮಾರುತಿ ಕ್ಯಾರಿ ಸೂಪರ್ ಕ್ಯಾರಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಅನಂತರಾಜು ಅವರ ಕೈ, ಕಾಲು ಹಾಗೂ ಹಣೆಯ ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ ಬಳಿಕ ಅಲ್ಲಿಂದ ಅಂಬ್ಯುಲೆನ್ಸ್ ಮೂಲಕ ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಬಳಿಕ ತುಮಕೂರು ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment