ಉಪ್ಪಿನಂಗಡಿ, ಜುಲೈ 17, 2025 (ಕರಾವಳಿ ಟೈಮ್ಸ್) : ಪತಿಯೇ ಚಾಕುವಿನಿಂದ ಇರಿದ ಪರಿಣಾಮ ಪತ್ನಿ ಗಂಭೀರ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಇಲ್ಲಿನ ನಿವಾಸಿ ಝೀನತ್ (40) ಎಂಬಾಕೆ ಮೃತ ಮಹಿಳೆಯಾಗಿದ್ದು, ಆಕೆಯ ಪತಿ ರಫೀಕ್ ಎಂಬಾತನೇ ಆರೋಪಿಯಾಗಿದ್ದಾನೆ. ರಫೀಕ್-ಝೀನತ್ ಅವರ ವಿವಾಹ ಸುಮಾರು 18 ವರ್ಷದ ಹಿಂದೆ ನಡೆದಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗಳ ಮಧ್ಯೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಗುರುವಾರ (ಜುಲೈ 17) ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ಆರೋಪಿ ರಫೀಕ್ ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿರುತ್ತಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಆರೋಪಿ ಪತಿ ರಫೀಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 64/2025 ಕಲಂ 103(1) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment