ಬಂಟ್ವಾಳ, ಜುಲೈ 12, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿಗೆ ಸೂಚಿಸಿದ್ದಾರೆ.
ಪೂಂಜಾಲಕಟ್ಟೆಯಲ್ಲಿ 18 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಕಟ್ಟಡವನ್ನು ಶುಕ್ರವಾರ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಾಲಿ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವಸತಿ ಕೊರತೆಯಿದ್ದು, ಹೀಗಾಗಿ ಸ್ಥಳಾಂತರ ತುರ್ತು ಅಗತ್ಯವಾಗಿದೆ. ಶೀಘ್ರವಾಗಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದರು.
ಇದೇ ವೇಳೆ ಮೇಲ್ದರ್ಜೆಗೇರಿರುವ ಪೂಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 12 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುವ ಕಟ್ಟಡವನ್ನು ಶಾಸಕರು ಪರಿಶೀಲನೆ ನಡೆಸಿದರು. ಕಾಮಗಾರಿಗಳ ಕುರಿತು ಆರೋಗ್ಯ ಇಲಾಖಾಧಿಕಾರಿಗಳು ಹಾಗೂ ಇಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ಪ್ರಾಂಶುಪಾಲ ಸಂತೋಷ್ ಸನಿಲ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ರೈ, ಪೂಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರಿತೇಶ್ ಶೆಟ್ಟಿ, ಪ್ರಮುಖರಾದ ತುಂಗಪ್ಪ ಬಂಗೇರ, ಶಾರದಾ, ಅಜಿತ್ ಕಾರಿಂಜ, ಪಿಲಾತಬೆಟ್ಟು ಹರ್ಷಿಣಿ ಪುಷ್ಪಾನಂದ, ಕಾಂತಪ್ಪ ಕರ್ಕೇರ, ಸಂತೋಷ್ ರಾಯಿಬೆಟ್ಟು, ಸುದರ್ಶನ ಬಜ, ಚಂದ್ರಶೇಖರ ಶೆಟ್ಟಿ ಕಮಂಗಿಲ ಮೊದಲಾದವರು ಜೊತೆಗಿದ್ದರು.
0 comments:
Post a Comment