ಬಂಟ್ವಾಳ, ಜುಲೈ 21, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭಾ ಸದಸ್ಯ, ದಲಿತ ಮುಖಂಡ, ಬಂಟ್ವಾಳ ಸಮೀಪದ ಚೆಂಡ್ತಮಾರ್ ನಿವಾಸಿ ಜನಾರ್ದನ ಚೆಂಡ್ತಿಮಾರ್ (55) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಇತ್ತೀಚೆಗಿನ ಕೆಲ ಸಮಯಗಳಿಂದ ಅನಾರೋಗ್ಯಕ್ಕೀಡಾಗಿ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದು, ರಾಜಕೀಯ, ಸಾಮಾಜಿಕ ಚಟುವಟಿಕೆಗಳಿಂದ ದೂರವಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಸಹಿತ ಪುರಸಭಾ ಸದಸ್ಯರುಗಳು ಹಾಗೂ ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ.
0 comments:
Post a Comment