ಗೋಳಿಯಂಗಡಿ : ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ವೇಣೂರು ಠಾಣೆಯಲ್ಲಿ ದೂರು ದಾಖಲು - Karavali Times ಗೋಳಿಯಂಗಡಿ : ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ವೇಣೂರು ಠಾಣೆಯಲ್ಲಿ ದೂರು ದಾಖಲು - Karavali Times

728x90

10 July 2025

ಗೋಳಿಯಂಗಡಿ : ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ವೇಣೂರು ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ, ಜುಲೈ 10, 2025 (ಕರಾವಳಿ ಟೈಮ್ಸ್) : ಮನೆಯ ಸಿಟೌಟಿನಲ್ಲಿ ಪಾರ್ಕ್ ಮಾಡಿದ್ದ ಬೈಕ್ ಕಳವಾಗಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ನಿವಾಸಿ ಅಬುಸಾಲಿ (58) ಅವರು ತನ್ನ ಬೈಕನ್ನು ಮಂಗಳವಾರ ಸಂಜೆ 7 ಗಂಟೆಗೆ ಗೋಳಿಯಂಗಡಿ ಮನೆಯ ಸಿಟೌಟಿನಲ್ಲಿ ಪಾರ್ಕ್ ಮಾಡಿ ಮೂಡಬಿದ್ರೆಯ ಇನ್ನೊಂದು ಮನೆಗೆ ತೆರಳಿದ್ದರು. ಮರುದಿನ ಬೆಳಿಗ್ಗೆ 6 ಗಂಟೆಗೆ ಬಂದಾಗ ಬೈಕ್ ಕಾಣೆಯಾಗಿದೆ. ರಾತ್ರಿ ವೇಳೆ ಯಾರೋ ಕಳ್ಳರು ಬೈಕ್ ಕಳವುಗೈದಿರುವುದಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳವಾಗಿರುವ ಬೈಕ್ ಮೌಲ್ಯ ಸುಮಾರು 15 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಅಬುಸಾಲಿ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಗೋಳಿಯಂಗಡಿ : ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ವೇಣೂರು ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top