ಬಂಟ್ವಾಳ, ಜುಲೈ 29, 2025 (ಕರಾವಳಿ ಟೈಮ್ಸ್) : ರಸ್ತೆ ಬದಿ ನಿಂತಿದ್ದ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬ್ರಹ್ಮರಕೂಟ್ಲು ಬಂಟವಾಳದ ಬಂಟರ ಭವನದ ಮುಂಭಾಗ ಜುಲೈ 27 ರಂದು ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಪುದು ಗ್ರಾಮದ 10ನೇ ಮೈಲಿಕಲು-ಸುಜೀರ್ ನಿವಾಸಿ ಜಯಂತಿ ಆಳ್ವ (70) ಎಂದು ಹೆಸರಿಸಲಾಗಿದೆ. ಇವರು ಭಾನುವಾರ ಬಂಟವಾಳದ ಬಂಟರ ಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಕಾರ್ಯಕ್ರಮಕ್ಕೆ ಹೋಗಲು ತನ್ನ ಮನೆಯಿಂದ ಅಟೋ ರಿಕ್ಷಾವೊಂದರಲ್ಲಿ ಬಂದು ಬಂಟರ ಭವನದ ಮುಂಭಾಗ ಇಳಿದು ಹೆದ್ದಾರಿಯ ಒಂದು ಬದಿಯನ್ನು ದಾಟಿ ಇನ್ನೊಂದು ಬದಿಯಲ್ಲಿ ನಿಂತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಫರಂಗಿಪೇಟೆ ಕಡೆಗೆ ಗುರುಪ್ರಸಾದ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಯಲ್ಪಟ್ಟ ಜಯಂತಿ ಅವರಿಗೆ ಗಾಯಗಳಾಗಿದ್ದು, ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment