ಬಂಟ್ವಾಳ, ಜುಲೈ 02, 2025 (ಕರಾವಳಿ ಟೈಮ್ಸ್) : ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಚಾಲಕನ ನಿಯಂತ್ರಣ ಮೀರಿದ ಕಾರು ಸ್ಕಿಡ್ ಆಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯ ಪೆರಾಜೆ ಗ್ರಾಮದ ಅಡ್ಲಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡ ಕಾರು ಚಾಲಕನನ್ನು ರಂಜಿತ್ ಕುಮಾರ್ ಎಂದು ಹೆಸರಿಸಲಾಗಿದೆ. ಕಾರು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಸ್ಕಿಡ್ ಆಗಿ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಚಾಲಕ ರಂಜಿತ್ ಕುಮಾರ್ ಅವರ ಎದೆ, ಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment