ಬಂಟ್ವಾಳ, ಜುಲೈ 14, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ಜುಲೈ 12 ರಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರರನ್ನು ವಿನೋದ್ ಎಂದು ಹೆಸರಿಸಲಾಗಿದೆ. ವಿನೋದ್ ಅವರು ತನ್ನ ಬೈಕಿನಲ್ಲಿ ಕುದ್ದುಪದವು ಕಡೆಯಿಂದ ಕನ್ಯಾನ ಕಡೆಗೆ ಸಂಚರಿಸುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಕೃಷ್ಣಪ್ರಸಾದ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರ ವಿನೋದ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment