ಪುತ್ತೂರು, ಜುಲೈ 23, 2025 (ಕರಾವಳಿ ಟೈಮ್ಸ್) : ಕಾಲೇಜು ಬಿಟ್ಟು ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳೊಂದಿಗೆ ಹತ್ತಿರದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಬಳಿ ಮಂಗಳವಾರ ಸಂಜೆ ವೇಳೆ ನಡೆದಿದೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಹೆಸರಿಸಲಾಗಿದೆ.
ವಿದ್ಯಾರ್ಥಿನಿ ಮಂಗಳವಾರ ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರಿಗೆ ಬರುವ ಕೆ.ಎಸ್.ಆರ್.ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತ ಸಂಜೆ ಸುಮಾರು 6:30 ಗಂಟೆಗೆ ಬಸ್ಸು ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆಕೆಯ ಬಳಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿರುವುದಾಗಿದೆ. ಈ ಸಂದರ್ಭ ಆಕೆ ಆ ವ್ಯಕ್ತಿಗೆ ಬೈದಿರುತ್ತಾಳೆ. ಬಳಿಕ ಈ ವಿಚಾರವನ್ನು ಆಕೆ ತಂದೆಗೆ ಪೋನ್ ಮುಖಾಂತರ ತಿಳಿಸಿದ್ದು, ಬಸ್ ಪುತ್ತೂರು ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಾಗ ಆರೋಪಿ ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದವನನ್ನು ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕರು ಹಿಡಿದಿದ್ದಾರೆ.
ಬಳಿಕ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 56/2025 ಕಲಂ 75 ಬಿ ಎನ್ ಎಸ್-2023 ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.














0 comments:
Post a Comment