ಬಂಟ್ವಾಳ, ಜುಲೈ 30, 2025 (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬಂಟ್ವಾಳ ಮೂಡ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಜುಲೈ 31 ರಂದು ಗುರುವಾರ (ಇಂದು) ಬೆಳಿಗ್ಗೆ 10.30ಕ್ಕೆ ಬಿ ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ನಡೆಯಲಿದೆ.
ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುವ ಈ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ವಕ್ತಾರರಾದ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಎಂ ಜಿ ಹೆಗ್ಡೆ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ತಿಳಿಸಿದ್ದಾರೆ.
0 comments:
Post a Comment